ಮಂಗಳವಾರ, ಮಾರ್ಚ್ 9, 2021
31 °C

ಪಕ್ಷದ ಎರಡು ಸ್ಥಾನಗಳಿಗೆ ರಾಜೀನಾಮೆ ನೀಡಿದ ಟಿಎಂಸಿ ಶಾಸಕ ಪ್ರಬೀರ್ ಘೋಷಾಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಉತ್ತರಪಾಡಾ ಕ್ಷೇತ್ರವನ್ನು ಪ್ರತಿನಿಧಿಸುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಪ್ರಬೀರ್ ಘೋಷಾಲ್ ಮಂಗಳವಾರ ಪಕ್ಷದ ಎರಡು ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ವಿಧಾನಸಭಾ ಸದಸ್ಯರಾಗಿ ಮುಂದುವರಿಯಲಿದ್ದಾರೆ.

‘ನನ್ನ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಲು ಅವಕಾಶ ಕೊಡದ ಪಕ್ಷದೊಳಗಿನ ಕೆಲವರ ಲಾಬಿಯಿಂದಾಗಿ ಹೂಗ್ಲಿ ಜಿಲ್ಲಾ ಸಮಿತಿ ಹಾಗೂ ಟಿಎಂಸಿ ವಕ್ತಾರ ಎರಡೂ ಹುದ್ದೆಗಳಿಗೆ ನನ್ನಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಆದರೆ, ಜನರ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡು ಶಾಸಕನಾಗಿ ಮುಂದುವರಿದಿದ್ದೇನೆ’ ಎಂದು ಪ್ರಬೀರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಏಪ್ರಿಲ್–ಮೇನಲ್ಲಿ ಚುನಾವಣೆಗಳಿರುವುದರಿಂದ ಅದಕ್ಕೂ ಮುನ್ನ ನಾನು ಟಿಎಂಸಿಯಿಂದ ನಿರ್ಗಮಿಸುವುದಿಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು