ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು; ಪಶ್ಚಿಮ ಬಂಗಾಳದ ಶಾಸಕ ನಿಧನ

Last Updated 17 ಆಗಸ್ಟ್ 2020, 7:58 IST
ಅಕ್ಷರ ಗಾತ್ರ

ಕೋಲ್ಕತ್ತ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ (76) ಪೂರ್ವ ಮಿಡ್ನಾಪೋರ್‌ ಜಿಲ್ಲೆಯ ಆಸ್ಪತ್ರೆಯಲ್ಲಿಸೋಮವಾರ ಮುಂಜಾನೆ ನಿಧನರಾಗಿದ್ದಾರೆ.

ಎರ್ಗಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಮರೇಶ್ ದಾಸ್‌ಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆಯಲ್ಲಿ ಹೃದಯ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಆರೋಗ್ಯ ತೊಂದರೆಗಳು ಕಾಣಿಸಿಕೊಂಡವು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT