ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ.ಬಂ ಚುನಾವಣೆ: 150ಕ್ಕೂ ಹೆಚ್ಚು ಇವಿಎಂಗಳ ಕಾರ್ಯ ಅಸಮರ್ಪಕ -ಟಿಎಂಸಿ ಸಂಸದೆ

Last Updated 1 ಏಪ್ರಿಲ್ 2021, 8:36 IST
ಅಕ್ಷರ ಗಾತ್ರ

ನವದೆಹಲಿ:ಪಶ್ಚಿಮ ಬಂಗಾಳ ವಿಧಾನಸಭೆಗೆ ಗುರುವಾರ 2ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಮಾರು 150ಕ್ಕೂ ಹೆಚ್ಚು ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಆರೋಪಿಸಿದ್ದಾರೆ.

ಈ ಸಂಬಂಧ ಚುನಾವಣಾ ಆಯೋಗವನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿಕಿಡಿಕಾರಿರುವ ಅವರು, ಇಂದು ಬೆಳಿಗ್ಗೆ 2ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾದಾಗಿನಿಂದ 150ಕ್ಕೂ ಹೆಚ್ಚು ಇವಿಎಂಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತಿಲ್ಲ. ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಹಾಗೆಯೇ, ಅದರಅರ್ಧದಷ್ಟು ಶ್ರಮವನ್ನು ಹಾಕಿದ್ದರೆ ಇವಿಎಂಗಳಲ್ಲಿನ ದೋಷದ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿತ್ತುʼ ಎಂದು ಗುಡುಗಿದ್ದಾರೆ.

ಎರಡನೇ ಹಂತದಲ್ಲಿ ಪಶ್ಚಿಮ ಬಂಗಾಳದ30 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು,ಆಯೋಗವು ಒಟ್ಟು10,620 ಮತಗಟ್ಟೆ ತೆರೆದಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಈ ಹಿಂದೆ ಅವರ ಆಪ್ತರಾಗಿದ್ದು, ಸದ್ಯ ಬಿಜೆಪಿ ಸೇರಿರುವ ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲೂ ಇಂದು ಚುನಾವಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT