ನವದೆಹಲಿ: ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಪಕ್ಷವು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದಿದೆ. ಇದನ್ನು ಸಾಬೀತುಪಡಿಸಲು ನಮ್ಮ ಬಳಿಪುರಾವೆಗಳಿವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯಾನ್ ಅವರುಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದಾರೆ. 2015ರ ಅಕ್ಟೋಬರ್‌ನಲ್ಲಿಡೆರೆಕ್ ಅವರು ಮಾರ್ಕ್ ಜುಕರ್‌ಬರ್ಗ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದರು. ಆಗಲೂ ಅವರು ಈ ಸಮಸ್ಯೆಯ ಬಗ್ಗೆ ಉಲ್ಲೇಖಿಸಿದ್ದರು ಎಂದು ಮೂಲಗಳು ತಿಳಿಸಿವೆ.

2014 ಮತ್ತು 2019ನೇ ಲೋಕಸಭಾ ಚುನಾವಣೆ ವೇಳೆ ಫೇಸ್‌ಬುಕ್ ಪಾತ್ರದ ಬಗ್ಗೆಯೂ ಡೆರೆಕ್ ಅವರು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನೇನು ಕೆಲವೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೆಲವೊಂದುಪೇಜ್‌ಗಳನ್ನುಫೇಸ್‌ಬುಕ್ ನಿರ್ಬಂಧಿಸಿದೆ. ಇದು ಕೂಡ ಬಿಜೆಪಿ ಮತ್ತು ಫೇಸ್‌ಬುಕ್ ನಡುವಿನ ಸಂಬಂಧವನ್ನು ಹೇಳುತ್ತದೆ. ಫೇಸ್‌ಬುಕ್, ಬಿಜೆಪಿ ಪರ ಕೆಲಸ ಮಾಡುತ್ತಿದೆ ಎಂಬುದಕ್ಕೆ ಹಲವು ಸಾಕ್ಷ್ಯಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.