ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ ಧೂಳಿಪಟ, 144 ರಲ್ಲಿ ಕೇವಲ 1 ಸ್ಥಾನ

ಟಿಎಂಸಿಗೆ ಭಾರೀ ಮುನ್ನಡೆ: 133 ಕ್ಕೂ ಹೆಚ್ಚು ಸ್ಥಾನ ನಿಕ್ಕಿ
Last Updated 21 ಡಿಸೆಂಬರ್ 2021, 13:04 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋಲ್ಕತ್ತ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಬಹುತೇಕ ಪ್ರಕಟಗೊಂಡಿದ್ದು, ಟಿಎಂಸಿ ಭಾರೀ ಮುನ್ನಡೆ ಸಾಧಿಸಿದ್ದರೆ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಕೋಲ್ಕತ್ತದ 144 ವಾರ್ಡುಗಳ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಅದರಲ್ಲಿ ಈವರೆಗೆ 101ಸ್ಥಾನಗಳನ್ನು ಟಿಎಂಸಿ ಗಿಟ್ಟಿಸಿಕೊಂಡಿದೆ.ಇನ್ನೂ 33ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 133 ಸ್ಥಾನಗಳನ್ನು ಗೆಲ್ಲಬಹುದು ಎನ್ನಲಾಗಿದೆ.

ರಾತ್ರಿಯ ವೇಳೆಗೆ ಚುನಾವಣೆಯ ಸ್ಪಷ್ಟ ಫಲಿತಾಂಶ ಹೊರ ಬೀಳಲಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ’ಜನರು ನಮ್ಮ ಕೆಲಸಗಳನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಬಿಜೆಪಿ, ಕಾಂಗ್ರೆಸ್, ಎಡಪಕ್ಷ ಈಗ ಎಲ್ಲಿವೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಬಿಜೆಪಿ ರಾಜಧಾನಿಯಲ್ಲೇ ನೆಲೆ ಕಂಡುಕೊಳ್ಳಲು ವಿಫಲವಾಗಿದ್ದು ಇದುವರೆಗಿನ ಮಾಹಿತಿ ಪ್ರಕಾರ 1 ಸ್ಥಾನ ಮಾತ್ರ ಗೆದ್ದುಕೊಂಡಿದ್ದು 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 2 ಹಾಗೂ ಪಕ್ಷೇತರರು 3 ವಾರ್ಡ್‌ಗಳಲ್ಲಿ ಗೆದ್ದಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ 114 ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್‌ 5, ಎಡ ಪಕ್ಷಗಳು 15, ಬಿಜೆಪಿ 7 ವಾರ್ಡ್‌ಗಳಲ್ಲಿ ಗೆದ್ದಿತ್ತು. ಮೂವರು ಪಕ್ಷೇತರರು ಗೆದ್ದಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಹಿಂದಿನ ದಾಖಲೆಗಳನ್ನು ಮುರಿಯುವ ಮುನ್ಸೂಚನೆ ನೀಡಿದೆ. ಸತತ ಮೂರನೇ ಬಾರಿಗೆ ಟಿಎಂಸಿ ಕೆಎಂಸಿ ಅಧಿಕಾರದ ಗದ್ದುಗೆ ಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT