ಗುರುವಾರ , ಮೇ 13, 2021
18 °C

ಪಶ್ಚಿಮ ಬಂಗಾಳ: ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗಲಿರುವ ಮಮತಾ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಸಂಜೆ 7ಕ್ಕೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್‌ ಧನ್‌ಖಡ್ ಅವರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮನವಿ ಮಾಡಲಿದ್ದಾರೆ ಎಂದು ರಾಜ ಭವನದ ಮೂಲಗಳಿಂದ ತಿಳಿದು ಬಂದಿದೆ.

ಆಡಳತಾರೂಢ ಟಿಎಂಸಿ ಪಕ್ಷವು ವಿಧಾನಸಭೆ ಚುನಾವಣೆಲ್ಲಿ 292 ಸ್ಥಾನಗಳ ಪೈಕಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ. ಆದರೆ, ತೀವ್ರ ಜಿದ್ದಾಜಿದ್ದಿಯ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಒಂದು ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆ ಕ್ಷೇತ್ರದಲ್ಲಿ ಟಿಎಂಸಿ ಮುನ್ನಡೆಯಲ್ಲಿದೆ.

77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು