ಗುರುವಾರ , ಮಾರ್ಚ್ 4, 2021
16 °C

ಪಶ್ಚಿಮ ಬಂಗಾಳ: ಬಾಂಬ್‌ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತ ಸಾವು, ಇಬ್ಬರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಾಂಬ್‌ ದಾಳಿಯಲ್ಲಿ ಆಡಳಿತಾರೂಢ ಟಿಎಂಸಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಬೈಕ್‌ನಲ್ಲಿ ಬಂದ ಆಕ್ರಮಣಕಾರರು ಬಾಂಬ್‌ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಗಡ ಪೊಲೀಸ್ ಠಾಣೆ ವ್ಯಾಪ್ತಿಯ ಅಭಿರಾಮ್‌ಪುರ ಗ್ರಾಮದಲ್ಲಿ ಶೌಭಿಕ್ ದೊಲುಯಿ ಹಾಗೂ ಇತರ ಇಬ್ಬರು ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಬಾಂಬ್ ಎಸೆದಿದ್ದಾರೆ. ಬಾಂಬ್ ಎಸೆದು ಪರಾರಿಯಾಗುವುದಕ್ಕೂ ಮುನ್ನ ದೊಲುಯಿ ಮೇಲೆ ಗಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಓದಿ: 

ಮೂವರನ್ನೂ ತಕ್ಷಣವೇ ಖರಾಗ್‌ಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದೊಲುಯಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಉಳಿದಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೇದಿನಿಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸ್ಥಳೀಯ ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಆದರೆ, ಇದು ಟಿಎಂಸಿಯ ಒಳಜಗಳದ ಪರಿಣಾಮ ಎಂದು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಸಮಿತ್ ದಾಸ್ ಹೇಳಿದ್ದಾರೆ.

ಓದಿ: 

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಆರೋಪ–ಪ್ರತ್ಯಾರೋಪಗಳೂ ತೀವ್ರಗೊಂಡಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು