ಬುಧವಾರ, ಸೆಪ್ಟೆಂಬರ್ 22, 2021
23 °C

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಂಜಾವೂರು (ಪಿಟಿಐ): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ಕರ್ನಾಟಕವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಹಸಿರುಶಾಲು ಧರಿಸಿ, ಎತ್ತಿನಗಾಡಿ ಮೆರವಣಿಗೆ ನಡೆಸಿದ ಮುಖಂಡರು, ಕಾರ್ಯಕರ್ತರು, ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕುಡಿಯುವ ನೀರು ಪೂರೈಕೆ, ವಿದ್ಯುತ್‌ ಉತ್ಪಾದನೆ ಉದ್ದೇಶದ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಮೇಕೆದಾಟುವಿಗೆ ಸಂಬಂಧಿಸಿ ಕರ್ನಾಟಕದ ಬಿಜೆಪಿ ಸರ್ಕಾರ ಬೆಂಬಲಿಸುವ ವಿರೋಧಪಕ್ಷಗಳ ನಿಲುವನ್ನು ಟೀಕಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, ‘ಕಾನೂನು ಸ್ಪಷ್ಟವಾಗಿ ನದಿಯ ಕೆಳಹಂತದ ರಾಜ್ಯಗಳ ಪರವಾಗಿದೆ’ ಎಂದರು.

ಕೆಳಹಂತದ ರಾಜ್ಯವಾದ ತಮಿಳುನಾಡು ಸಹಮತವಿಲ್ಲದೆ ಅಣೆಕಟ್ಟು ನಿರ್ಮಿಸುವುದು ಸಾಧ್ಯವೇ ಇಲ್ಲ. ಅಂತರರಾಜ್ಯ ನದಿ ವಿವಾದ ಕಾಯ್ದೆಯೂ ಸ್ಪಷ್ಟವಾಗಿದೆ. ಬಿಜೆಪಿಯು ಎಂದಿಗೂ ರೈತರ ಪರವಾಗಿರಲಿದ್ದು, ಅಣೆಕಟ್ಟು ನಿರ್ಮಿಸಲು ಅವಕಾಶ ಕೊಡುವುದಿಲ್ಲ. ಕರ್ನಾಟಕ ಸರ್ಕಾರ ಇದನ್ನು ಕೈಬಿಡಬೇಕು ಎಂದು ಪ್ರತಿಪಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು