‘ಎಐಎಡಿಎಂಕೆಗೆ ಶಶಿಕಲಾ ಸೇರ್ಪಡೆ ಇಲ್ಲ’

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರವನ್ನು ಚುನಾವಣೆ ಅಧಿಸೂಚನೆ ಪ್ರಕಟವಾದ ಬಳಿಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಎಐಎಡಿಎಂಕೆಗೆ ವಿ.ಕೆ.ಶಶಿಕಲಾ ಸೇರ್ಪಡೆ ವಿಚಾರವನ್ನು ತಿರಸ್ಕರಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದಿಂದ ಶಶಿಕಲಾ ಅವರನ್ನು ಅಮ್ಮನೇ (ಜಯಲಲಿತಾ) ಹೊರಹಾಕಿದ್ದರು’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.