ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9.69 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಡೇಟಾ: ತಮಿಳುನಾಡು ಸಿಎಂ ಪಳನಿಸ್ವಾಮಿ

ಏಪ್ರಿಲ್‌ ವರೆಗೆ ಆನ್‌ಲೈನ್‌ ತರಗತಿಗೆ ಹಾಜರಾಗಲು ಅನುಕೂಲ
Last Updated 10 ಜನವರಿ 2021, 10:17 IST
ಅಕ್ಷರ ಗಾತ್ರ

ಚೆನ್ನೈ: ರಾಜ್ಯದ 9.69 ಲಕ್ಷ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿದಿನ ಉಚಿತವಾಗಿ 2 ಜಿಬಿ ಡೇಟಾ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಭಾನುವಾರ ಹೇಳಿದ್ದಾರೆ.

ಏಪ್ರಿಲ್‌ ವರೆಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಲಾಗುತ್ತಿದೆ ಎಂದೂ ಹೇಳಿದ್ದಾರೆ.

‘ಕೋವಿಡ್‌–19ನಿಂದಾಗಿ ಅನೇಕ ತಿಂಗಳು ಕಾಲ ತರಗತಿಗಳು ನಡೆದಿಲ್ಲ. ಈಗ ಆನ್‌ಲೈನ್‌ ಮೂಲಕ ಪಾಠ ಹೇಳಲಾಗುತ್ತಿದೆ. ಈ ಕಾರಣಕ್ಕೆ ಉಚಿತ ಡೇಟಾ ನೀಡಲು ನಿರ್ಧರಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 9,69,047 ವಿದ್ಯಾರ್ಥಿಗಳಿಗೆ ಡೇಟಾ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT