ಶನಿವಾರ, ಜೂನ್ 25, 2022
21 °C

ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಸ್ಟಾಲಿನ್ ಪುತ್ರ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

PTI

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಚುನಾವಣಾ ಚಟುವಟಿಕೆಯಲ್ಲಿ ತೊಡಗಿವೆ. ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿ ನಿರತವಾಗಿವೆ.

ಈ ಮಧ್ಯೆ ಶನಿವಾರ ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷ ಡಿಎಂಕೆಯ ಅಧ್ಯಕ್ಷ ಎಂ ಕೆ ಸ್ಟಾಲಿನ್ ಪುತ್ರ, ಡಿಎಂಕೆ ಯೂತ್ ವಿಂಗ್ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಪಕ್ಷದ ಟಿಕೆಟ್‌ ಪಡೆದುಕೊಳ್ಳಲು ಸಂದರ್ಶನ ಎದುರಿಸಿದ್ದಾರೆ.

ಡಿಎಂಕೆ ಪಕ್ಷದ ಟಿಕೆಟ್ ಪಡೆದುಕೊಳ್ಳುವ ಆಕಾಂಕ್ಷಿಗಳು ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ಎದುರಿಸುವುದು ಕಡ್ಡಾಯವಾಗಿದೆ. ಅದರಂತೆ ತಮಿಳುನಾಡಿನ ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಸಂದರ್ಶನ ನಡೆದಿದೆ.

ಉದಯನಿಧಿ ಸ್ಟಾಲಿನ್ ಚೆನ್ನೈ-ಚೆಪಕ್ ವಿಧಾನಸಭಾ ಕ್ಷೇತ್ರದಿಂದ ಡಿಎಂಕೆ ಪಕ್ಷದ ಟಿಕೆಟ್ ಬಯಸಿದ್ದಾರೆ. ಪಕ್ಷ ಅವರಿಗೆ ಟಿಕೆಟ್ ನೀಡುವ ಕುರಿತು ಇನ್ನಷ್ಟೆ ನಿರ್ಧರಿಸಿ ಪ್ರಕಟಿಸಲಿದೆ ಎನ್ನಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು