ತಮಿಳುನಾಡು: 9,10,11ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ಹಾಜರಾಗಬೇಕಾಗಿಲ್ಲ. ಈ ತರಗತಿಗಳ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.
‘ವಿದ್ಯಾರ್ಥಿಗಳು, ಶಿಕ್ಷಕರು ಈ ವರ್ಷ ವಿಭಿನ್ನ ಪರಿಸ್ಥಿತಿ ಎದುರಿಸಿದ್ದಾರೆ. ಈ ಬಗ್ಗೆ ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು 2020–21ನೇ ಶೈಕ್ಷಣಿಕ ವರ್ಷದಲ್ಲಿನ 9,10 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೆಯೇ ಉತ್ತೀರ್ಣಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ವಿಧಾನಸಭೆಯಲ್ಲಿ ಗುರುವಾರ ಪ್ರಕಟಿಸಿದ್ದಾರೆ.
‘ಕಳೆದ ವರ್ಷ ಮಾರ್ಚ್ 25ರಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಪ್ರಸಕ್ತ ವರ್ಷದ ಜನವರಿ 19ರಂದು 10 ಮತ್ತು 12ನೇ ತರಗತಿಗಳಿಗೆ ಮಾತ್ರ ತೆರೆಯಲಾಗಿತ್ತು. ಈ ವರ್ಷ ಪಠ್ಯಕ್ರಮವನ್ನು ಸಹ ಕಡಿತಗೊಳಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.