ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಸಾಲ ಮನ್ನಾ ಪ್ರಕ್ರಿಯೆ ಆರಂಭ

Last Updated 13 ಫೆಬ್ರುವರಿ 2021, 13:43 IST
ಅಕ್ಷರ ಗಾತ್ರ

ಚೆನ್ನೈ: ₹ 12,100 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಶನಿವಾರ ಒಂಬತ್ತು ರೈತರಿಗೆ ಸಾಲ ಮನ್ನಾ ಮಾಡಿದ ಪ್ರಮಾಣಪತ್ರಗಳನ್ನು ನೀಡಿದ್ದಾರೆ.

ಈ ಪ್ರಮಾಣಪತ್ರದಲ್ಲಿ ಸಹಕಾರಿ ಬ್ಯಾಂಕುಗಳಿಂದ ಪಡೆದ ಸಾಲವನ್ನು 2021ರ ಜನವರಿ 31ರಂದು ಮನ್ನಾ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಒ. ಪನ್ನೀರ್‌ ಸೆಲ್ವಂ, ಕೃಷಿ ಸಚಿವ ಕೆ.ಪಿ ಅನ್ಬಳಗನ್‌ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಫೆಬ್ರುವರಿ 5ರಂದು ಮುಖ್ಯಮಂತ್ರಿ ಪಳನಿಸ್ವಾಮಿ ಸಹಕಾರಿ ಬ್ಯಾಂಕುಗಳಿಂದ ರೈತರು ಪಡೆದ ₹ 12,100 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಇದರಿಂದ ರಾಜ್ಯದ 16.43 ಲಕ್ಷ ರೈತರಿಗೆ ಲಾಭವಾಗಲಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಈ ಸಾಲಮನ್ನಾವನ್ನು ವಿಶೇಷವಾಗಿ ಪರಿಗಣಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT