ಶ್ರೀಲಂಕಾ ತಮಿಳರ ಸಂಕಷ್ಟದ ಬಗ್ಗೆ ಕೇಂದ್ರದ ಜತೆ ಚರ್ಚೆ: ಸ್ಟಾಲಿನ್

ಚೆನ್ನೈ: ಇತ್ತೀಚೆಗೆ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಿಂದ ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ಬಂದ ಲಂಕಾದ ಪ್ರಜೆಗಳ ಕುರಿತಾಗಿ ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿರುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿದ ಸ್ಟಾಲಿನ್ ಅವರು, 'ಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸಮಸ್ಯೆಗೆ ಸಿಲುಕಿರುವ ತಮಿಳು ಜನಾಂಗದವರು ತಮಿಳುನಾಡಿಗೆ ಬಂದ ಸುದ್ದಿಯನ್ನು ನೋಡಿದ್ದೇನೆ. ಈ ವಿಚಾರವನ್ನು ಕಾನೂನಾತ್ಮಕವಾಗಿ ನಿಭಾಯಿಸುವ ಬಗ್ಗೆ ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿದ್ದು ಚರ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದಾರೆ.
ಲಂಕಾದ ತಮಿಳರ ನೆರವಿಗಾಗಿ ತಮಿಳುನಾಡು ಸರ್ಕಾರ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದರು. ಬುಧವಾರವಷ್ಟೇ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 10 ಸದಸ್ಯರ ಗುಂಪೊಂದು ರಾಮೇಶ್ವರಕ್ಕೆ ಬಂದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.