ಭಾನುವಾರ, ಜನವರಿ 17, 2021
24 °C

ತಮಿಳುನಾಡು: 10, 12ನೇ ತರಗತಿ ವಿದ್ಯಾರ್ಥಿಗಳಿಗೆ 19ರಿಂದ ಶಾಲೆ ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳುನಾಡಿನಲ್ಲಿ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜನವರಿ 19 ರಿಂದ ಶಾಲೆಯನ್ನು ಪ್ರಾರಂಭಿಸಲಾಗುವುದು. ಆದರೆ ಒಂದು ತರಗತಿಯಲ್ಲಿ 25ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವಂತಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಮಂಗಳವಾರ ತಿಳಿಸಿದರು.

‘10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಮಾರ್ಚ್‌–ಏಪ್ರಿಲ್‌ ತಿಂಗಳಲ್ಲಿ ಪಬ್ಲಿಕ್‌ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿ ಮೇರೆಗೆ ತರಗತಿಗಳನ್ನು ತೆರೆಯಲಾಗುತ್ತಿದೆ. ಅಲ್ಲದೆ ಅವರಿಗೆ ವಿಟಮಿನ್ ಮಾತ್ರೆಗಳನ್ನು ಕೂಡ ನೀಡಲಾಗುವುದು’ ಎಂದು ಅವರು ಹೇಳಿದರು.

‘ಸರ್ಕಾರದ ಮಾರ್ಗಸೂಚಿಯಡಿ ಕೇವಲ ಈ ಎರಡು ತರಗತಿಗಳಿಗಾಗಿ ಶಾಲೆಯನ್ನು ತೆರೆಯಲಾಗುವುದು. ಸಾರ್ವಜನಿಕ ಆರೋಗ್ಯ, ವೈದ್ಯಕೀಯ ತಜ್ಞರು, ಜಿಲ್ಲಾಧಿಕಾರಿಗಳು, ಹಿರಿಯ ಸಚಿವರು ಮತ್ತು ಪೋಷಕರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪಳನಿಸ್ವಾಮಿ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು