ಲಂಕಾ ನೆರವಿಗೆ ನಿಂತ ತಮಿಳುನಾಡು: ಅಕ್ಕಿ, ಹಾಲಿನ ಪುಡಿ, ಔಷಧಿ ರವಾನಿಸಲು ತೀರ್ಮಾನ

ಚೆನ್ನೈ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಶ್ರೀಲಂಕಾದ ಜನರ ನೆರವಿಗೆ ತಮಿಳುನಾಡು ಸರ್ಕಾರ ಧಾವಿಸಿದೆ. ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.
ತಮಿಳುನಾಡು ಸರ್ಕಾರದ ಈ ಉದ್ದೇಶಕ್ಕೆ ನಾಗರಿಕರೂ ದೇಣಿಗೆ ನೀಡುವ ಮೂಲಕ ನೆರವಾಗಬಹುದು ಎಂದು ಸ್ಟಾಲಿನ್ ಹೇಳಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಿ ಶ್ರೀಲಂಕಾಕ್ಕೆ ತಲುಪಿಸುವುದಾಗಿ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ತಮಿಳುನಾಡು ಶೀಘ್ರದಲ್ಲಿಯೇ ಶ್ರೀಲಂಕಾಕ್ಕೆ 40,000 ಟನ್ ಅಕ್ಕಿ, 500 ಟನ್ ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಕಳುಹಿಸಲಿದೆ ಎಂದು ಸ್ಟಾಲಿನ್ ಹೇಳಿದರು.
ಕೊಲಂಬೊದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುತ್ತಿರುವ ತಮಿಳರಿಗೆ ಆಹಾರ ಧಾನ್ಯ, ತರಕಾರಿ ಮತ್ತು ಔಷಧಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನಿಸಲು ರಾಜ್ಯಕ್ಕೆ ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಇತ್ತೀಚೆಗೆ ಮನವಿ ಮಾಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.