ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಡಿ ಸಾಯಿಬಾಬಾ ದೇವಸ್ಥಾನ ಭೇಟಿಗೆ ಆನ್‌ಲೈನ್‌ ಪಾಸ್‌ ವ್ಯವಸ್ಥೆ

Last Updated 11 ಜನವರಿ 2021, 16:16 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಇನ್ನು ಮುಂದೆ ದೇವರ ದರ್ಶನ ಹಾಗೂ ಮಂಗಳಾರತಿಯ ಪಾಸ್‌ಗಳನ್ನು ಆನ್‌ಲೈನ್‌ನಲ್ಲೇ ಪಡೆದುಕೊಳ್ಳಬೇಕಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ದೇವಸ್ಥಾನದ ಆಡಳಿತವು ಈ ವ್ಯವಸ್ಥೆ ಜಾರಿಗೊಳಿಸಿದೆ.

‘ಆನ್‌ಲೈನ್‌ ಪಾಸ್‌ ವ್ಯವಸ್ಥೆಯು ಇದೇ 14ರಿಂದ ಜಾರಿಯಾಗಲಿದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಾಸ್‌ಗಳು ಲಭ್ಯವಿರಲಿವೆ. ಗುರುವಾರ, ವಾರಾಂತ್ಯ ಹಾಗೂ ವಿಶೇಷ ದಿನಗಳು ಮತ್ತು ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿರಲಿದೆ. ಈ ದಿನಗಳಲ್ಲಿ ದೇವಸ್ಥಾನದ ಆವರಣದಲ್ಲಿರುವ ಕೌಂಟರ್‌ಗಳಲ್ಲಿ ಪಾಸ್‌ಗಳನ್ನು ನೀಡಲಾಗುವುದಿಲ್ಲ. ಕೋವಿಡ್‌ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ‌ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT