ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುದ್ಯೋಗ ದೇಶದ ದೊಡ್ಡ ಸಮಸ್ಯೆಯಾಗಿದೆ: ತೇಜಸ್ವಿ ಯಾದವ್‌ 

Last Updated 9 ಸೆಪ್ಟೆಂಬರ್ 2020, 6:12 IST
ಅಕ್ಷರ ಗಾತ್ರ

ಪಟ್ನಾ: ದೇಶದಲ್ಲಿ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಹಾರದಲ್ಲಿ ಸುಮಾರು 7 ಕೋಟಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಅನೇಕರು ಕೆಲಸ ಬಿಟ್ಟು ತಮ್ಮ ಊರುಗಳಿಗೆ ಹಿಂತಿರುಗಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ ಆದೇಶದ ನಂತರವೂ ನಿತೀಶ್‌ ಕುಮಾರ್‌ ನೇತೃತ್ವ ಸರ್ಕಾರ ಉದ್ಯೋಗ ಒದಗಿಸುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದ್ದಾರೆ.

ಸ್ವ–ಸಹಾಯ ಸಂಘಗಳು ಸೇರಿದಂತೆ ನಿರುದ್ಯೋಗಿಗಳು ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ ಬೆಳಗಿಸುವ ಅಭಿಯಾನಕ್ಕೆ ಕರೆ ನೀಡಿದ್ದಾರೆ. ನಮ್ಮ ಪಕ್ಷ ಅಭಿಯಾನವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳ ಭರಾಟೆ ಜೋರಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT