ಗುರುವಾರ , ಜನವರಿ 21, 2021
16 °C
ಮತ್ತೆ ಮೂರು ಮೃತದೇಹಗಳು ಪತ್ತೆ

ಇಡುಕ್ಕಿ ಭೂಕುಸಿತ: ಸಾವಿನ ಸಂಖ್ಯೆ 52ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಪೆಟ್ಟಿಮುಡಿ ಪ್ರದೇಶದಲ್ಲಿ ಉಂಟಾಗಿರುವ ಭೂಕುಸಿತದಲ್ಲಿ ಕಣ್ಮರೆಯಾಗಿದ್ದವರ ಪೈಕಿ ಮೂವರ ಮೃತದೇಹಗಳನ್ನು ಮಂಗಳವಾರ ಪತ್ತೆಹಚ್ಚಲಾಗಿದ್ದು, ಇದರಿಂದ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿದೆ.

‘ಕಣ್ಮರೆಯಾದವರ ಪತ್ತೆಗಾಗಿ ಮಂಗಳವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆಯ ಮೃತದೇಹವನ್ನು ಪತ್ತೆಹಚ್ಚಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

‘ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಜತೆಗೆ, ಅಗ್ನಿಶಾಮಕ ದಳ, ಅರಣ್ಯ ಮತ್ತು ಪೊಲೀಸ್ ಇಲಾಖೆಗಳೂ ಕಾರ್ಯಾಚರಣೆ ಕೈಗೊಂಡಿವೆ. ಆ. 7ರಂದು ರಾಜಮಾಲಾ ಬಳಿ ಸಂಭವಿಸಿದ ದುರಂತದಲ್ಲಿ ನಾಪತ್ತೆಯಾದ 19 ಮಂದಿಯ ಪತ್ತೆಗಾಗಿ ನದಿಯ ಕೆಳ ಪ್ರದೇಶದಲ್ಲೂ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

ಇಡುಕ್ಕಿ ಜಿಲ್ಲೆಯ ಮುಲ್ಲಾಪೆರಿಯಾರ್ ಜಲಾಶಯದ ಮಟ್ಟ ಮಂಗಳವಾರ 136.85 ಅಡಿ ತಲುಪಿದೆ.

ಮಳೆ ಪ್ರಮಾಣ ಕಡಿಮೆಯಾದ್ದರಿಂದ ಕೊಟ್ಟಾಯಂ ಮತ್ತು ಆಲಪ್ಪುಳ ಜಿಲ್ಲೆಯ ತಗ್ಗು ಪ್ರದೇಶದಲ್ಲಿ ನೆರೆ ಹಾವಳಿ ಕಮ್ಮಿಯಾಗಿದೆ. ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಹಾಗೂ ಮಳೆಪೀಡಿತ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ 14 ಜಿಲ್ಲೆಗಳಲ್ಲಿ ಘೋಷಿಸಲಾಗಿದ್ದ ರೆಡ್ ಅಲರ್ಟ್ ಹಿಂತೆಗೆದುಕೊಳ್ಳಲಾಗಿದೆ.

ಚರ್ಚ್ ಕುಸಿತ: ಆಲಪ್ಪುಳ ಜಿಲ್ಲೆಯ ಪಲ್ಲಥುರುತಿಯಲ್ಲಿ ಮಳೆಗೆ 151 ವರ್ಷಗಳಷ್ಟು ಹಳೆಯದಾದ ಸಿಎಸ್‌ಐ ಚರ್ಚ್ ಕುಸಿದಿದೆ. ಈ ಚರ್ಚ್‌ ಅನ್ನು 1869ರಲ್ಲಿ ನಿರ್ಮಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು