ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೂಲ್‌ಕಿಟ್‌ ಪ್ರಕರಣ: ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾಗೆ ನೋಟಿಸ್‌

Last Updated 23 ಮೇ 2021, 21:06 IST
ಅಕ್ಷರ ಗಾತ್ರ

ರಾಯಪುರ: ಟೂಲ್‌ಕಿಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಲು ಭಾನುವಾರ (ಮೇ 24) ಸಂಜೆ 4ಕ್ಕೆ ಖುದ್ದಾಗಿ ಅಥವಾ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಅವರಿಗೆ ರಾಯಪುರ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪಾತ್ರಾ ಹಾಗೂ ಬಿಜೆಪಿ ನಾಯಕ ರಮಣ ಸಿಂಗ್‌ ಅವರ ವಿರುದ್ಧ ಛತ್ತೀಸಗಡದ ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಠಾಣೆಯ ಅಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ಅವರು ಹೇಳಿದರು.

ಸಂಬಿತ್ ಪಾತ್ರಾ, ರಮಣ್‌ ಸಿಂಗ್‌ ಸೇರಿದಂತೆ ಇತರರು ಟೂಲ್‌ಕಿಟ್‌ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋ‍ಪಿಸಿ ಎನ್‌ಎಸ್‌ಯುಐ ಮುಖಂಡರು ಮೇ 19 ರಂದು ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT