ಬುಧವಾರ, ಏಪ್ರಿಲ್ 14, 2021
31 °C

ಟೂಲ್‌ಕಿಟ್‌ ಪ್ರಕರಣದ ಆರೋಪಿ ಶಾಂತನು ಮುಲುಕ್‌ಗೆ ಬಂಧನದಿಂದ ರಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಟೂಲ್‌ಕಿಟ್‌ ಪ್ರಕರಣದ ಆರೋಪಿ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಬಂಧನದಿಂದ ರಕ್ಷಣೆ ನೀಡಿದೆ.

‘ಶಾಂತನು ಮುಲುಕ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವುದಕ್ಕೂ ಮುನ್ನ ‌‌ಈ ಬಗ್ಗೆ ತನಿಖೆ ನಡೆಸಲು ಹೆಚ್ಚಿನ ಸಮಯ ಅವಕಾಶ ಬೇಕು’ ಎಂದು ದೆಹಲಿ ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾರ್ಚ್‌ 9ರ ವರೆಗೆ ಶಾಂತನು ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.

‘ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆ ಮಾರ್ಚ್‌ 9 ರಂದು ನಡೆಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಶಾಂತನು ಅವರನ್ನು ಬಂಧಿಸಬಾರದು’ ಎಂದು ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಧರ್ಮೇಂದರ್‌ ರಾಣಾ ಸೂಚಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು