ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರೆನಗ್ನ ದೇಹದ ಮೇಲೆ ಮಕ್ಕಳಿಂದ ಪೇಂಟ್‌: ಫಾತಿಮಾಗೆ ಜಾಮೀನು ನಿರಾಕರಿಸಿದ ಸುಪ್ರೀಂ

Last Updated 7 ಆಗಸ್ಟ್ 2020, 9:00 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ವಿವಾದಿತ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾಗೆನಿರೀಕ್ಷಣಾ ಜಾಮೀನು ನೀಡಲುಸುಪ್ರೀಂ ಕೋರ್ಟ್ ನಿರಾಕರಿಸಿದೆ.

ರೆಹಾನಾ ಫಾತಿಮಾ ಅವರು ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾ. ಅರುಣ್‌ ಮಿಶ್ರಾ ನೇತೃತ್ವದ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅರ್ಜಿದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನೀವು ಸಾಮಾಜಿಕ ಕಾರ್ಯಕರ್ತರಾಗಿ ಯಾಕೆ ಹೀಗೆ ಮಾಡಿದೀರಿ? ಇದರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗವುದಿಲ್ಲವೇ ಎಂದು ಪ್ರಶ್ನೆ ಮಾಡಿದರು.

ಈ ಪ್ರಕರಣದಲ್ಲಿ ನಮ್ಮ ಕಕ್ಷಿದಾರರ ಬಂಧನವಾದರೆ, ಜೀವನ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ನಮ್ಮ ಕಕ್ಷಿದಾರರು ವಿಚಾರಣೆಗೆ ಸರಿಯಾಗಿ ಹಾಜರಾಗಿದ್ದಾರೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಜಾಮೀನು ಅರ್ಜಿಯ ವಿಚಾರಣೆ ಆಲಿಸಿದ ನ್ಯಾಯಪೀಠ ಜಾಮೀನು ನೀಡಲು ನಿರಾಕರಿಸಿತು.

ಫಾತೀಮಾರ ಅರೆನಗ್ನ ದೇಹದ ಮೇಲೆ ಆಕೆಯ ಮಕ್ಕಳೇ ಚಿತ್ರ ಬಿಡಿಸುತ್ತಿದ್ದ ವಿಡಿಯೋ ಸಂಬಂಧಿತ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿತ್ತು. ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಾರಣ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಆಕೆಯ ಜೀವನದ ಮೂಲಭೂತ ಹಕ್ಕು, ಸ್ವಾತಂತ್ರ್ಯ ಮತ್ತು ಘನತೆಯನ್ನು ಉಲ್ಲಂಘಿಸಿರುವ ತನ್ನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಫಾತಿಮಾ ಸುಪ್ರೀಂ ಮೊರೆ ಹೋಗಿದ್ದರು.

ಅಪ್ರಾಪ್ತ ವಯಸ್ಸಿನ ತಮ್ಮ ಇಬ್ಬರು ಮಕ್ಕಳೆದುರು ಅರೆಬೆತ್ತಲೆಯಾಗಿ ಮಲಗಿ ತನ್ನ ದೇಹದ ಮೇಲೆ ಚಿತ್ರ ಬಿಡಿಸುವಂತೆ ರೆಹಾನಾ ಫಾತೀಮಾ ಮಕ್ಕಳಿಗೆ ಸೂಚಿಸಿದ್ದರು. ಈ ದೃಶ್ಯಗಳಿಗೆ ಬಾಡಿ ಆ್ಯಂಡ್​ ಪಾಲಿಟಿಕ್ಸಟ್​ ಎಂಬ ಶೀರ್ಷಿಕೆ ಕೂಡ ಕೊಟ್ಟಿದ್ದರು ಫಾತಿಮಾ. ಮಕ್ಕಳು ಚಿತ್ರ ಬಿಡಿಸುತ್ತಿರುವ ದೃಶ್ಯವು ಸಾಮಾಜಿಕ ಜಾತಲಾಣಗಳಲ್ಲಿ ವೈರಲ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT