ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಕಮಾಂಡರ್‌ ಹತ

Last Updated 7 ಜುಲೈ 2021, 6:35 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು–ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಭದ್ರತಾ ಪಡೆಯು ಹೊಡೆದುರುಳಿಸಿದೆ’ ಎಂದು ಪೊಲೀಸರು ತಿಳಿಸಿದರು.

ಹಿಜ್ಬುಲ್ ಮುಜಾಹಿದ್ದೀನ್‌ ಉಗ್ರ ಸಂಘಟನೆಯ ಉನ್ನತ ಕಮಾಂಡರ್‌ ಮೆಹ್ರಾಜುದ್ದೀನ್ ಹಲ್ವಾಯ್ ಉಬೈದ್‌ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಈತ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಕಾಶ್ಮೀರ ವಲಯದ ಇನ್‌ಸ್ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ವಿಜಯ್‌ ಕುಮಾರ್‌ ಅವರು ಟ್ವೀಟ್‌ ಮಾಡಿದ್ದಾರೆ.

‘ಹಂಡ್ವಾರಾ ಪ್ರದೇಶದ ಪಾಜಿಪೋರಾ-ರೆನಾನ್‌ನಲ್ಲಿ ಉಗ್ರರು ಇರುವ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಬುಧವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಉಗ್ರರು ಮೊದಲು ಗುಂಡು ಹಾರಿಸಿದ್ದು, ಭದ್ರತಾ ಪಡೆಗಳೂ ಪ್ರತಿಯಾಗಿ ಗುಂಡು ಹಾರಿಸಿದವು. ಘಟನೆಯಲ್ಲಿ ಮೆಹ್ರಾಜುದ್ದೀನ್ ಹಲ್ವಾಯ್ ಮೃತ‍ಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT