ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ: ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

Last Updated 13 ಅಕ್ಟೋಬರ್ 2021, 11:27 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್‌ನ (ಜೆಇಎಂ) ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕ ಕಮಾಂಡರ್ ಶಾಮ್ ಸೋಫಿ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಅವಂತಿಪುರದ ತ್ರಾಲ್ ಪ್ರದೇಶದ ತಿಲ್ವಾನಿ ಮೊಹಲ್ಲಾ ವಗ್ಗದ್‌ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿಯ ಮೇರೆಗೆ ಪುಲ್ವಾಮ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಉಗ್ರರು ಭದ್ರತಾ ಪಡೆಯ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದಾಗ ಪಡೆಯು ಪ್ರತಿದಾಳಿ ನಡೆಸಿತು. ಆಗ ಉಗ್ರರ ಕಮಾಂಡರ್‌ ಶಾಮ್ ಸೋಫಿ ಹತ್ಯೆಗೀಡಾಗಿದ್ದಾನೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT