ಸೋಮವಾರ, ಜುಲೈ 26, 2021
22 °C

ಪೊಲೀಸರು, ಕೌನ್ಸಿಲರ್‌ಗಳನ್ನು ಕೊಂದಿದ್ದ ಭಯೋತ್ಪಾದಕ ಎನ್‌ಕೌಂಟರ್‌ಗೆ ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಎಂಬಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವೆ ಸೋಮವಾರ ನಸುಕಿನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆಗಳ ಗುಂಡೇಟಿಗೆ ಲಷ್ಕರ್‌ ಎ ತಯ್ಬಾದ ಮುದಾಸಿರ್‌ ಪಂಡಿತ್‌ ಸೇರಿ ಮೂವರು ಉಗ್ರರು ಬಲಿಯಾಗಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಲಷ್ಕರ್‌ ಎ ತಯ್ಬಾ ಸಂಘಟನೆಯ ಪ್ರಮುಖ ಮುದಾಸಿರ್‌ ಪಂಡಿತ್‌ ಸೇರಿ ಮೂವರು ಉಗ್ರರು ಘಟನೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ.

ಪಂಡಿತ್‌, ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಬಿಜೆಪಿ ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರನ್ನು ಕೊಲೆ ಮಾಡಿದ್ದ ಎಂದು ಜಮ್ಮು ಕಾಶ್ಮೀರದ ಐಜಿಪಿ ಟ್ವೀಟ್ ಮಾಡಿದ್ದಾರೆ.

ಗುಂಡ್‌ ಬ್ರಾತ್‌ನಲ್ಲಿ ಪಂಡಿತ್ ಸೇರಿದಂತೆ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು