ಸೋಮವಾರ, ಜುಲೈ 26, 2021
21 °C

ಜಮ್ಮು–ಕಾಶ್ಮೀರ: ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಮೂವರು ಎಲ್‌ಇಟಿ ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರ ಮುದಾಸಿರ್ ಪಂಡಿತ್ ಸೇರಿದಂತೆ ಲಷ್ಕರ್‌–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಉಗ್ರರು ಅನೇಕ ದಾಳಿ, ಹತ್ಯೆ ಪ್ರಕರಣಗಳಲ್ಲಿ ಶಾಮೀಲಾಗಿದ್ದರು. ಹೀಗಾಗಿ ಈ ಕಾರ್ಯಾಚರಣೆಯು ಪೊಲೀಸರು ಮತ್ತು ಭದ್ರತಾ ಪಡೆಗಳಿಗೆ ಬಹು ಮುಖ್ಯವಾದದ್ದಾಗಿತ್ತು ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಮಾರ್ಚ್‌ 29ರಂದು ಸೋಪೋರ್‌ನಲ್ಲಿ ನಡೆದ ದಾಳಿಯಲ್ಲಿ ಇವರ ಕೈವಾಡವಿತ್ತು. ಆ ದಾಳಿಯಲ್ಲಿ ಇಬ್ಬರು ಮುನ್ಸಿಪಲ್ ಕೌನ್ಸಿಲರ್‌ಗಳು ಮತ್ತು ಒಬ್ಬ ಪೊಲೀಸ್ ಹತರಾಗಿದ್ದರು. ಜೂನ್ 12ರಂದು ನಡೆದಿದ್ದ ಮತ್ತೊಂದು ದಾಳಿಯಲ್ಲಿಯೂ ಇವರ ಕೈವಾಡವಿತ್ತು. ದಾಳಿಯಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸಾವಿಗೀಡಾಗಿದ್ದರು.

ಪಂಡಿತ್ ಸೇರಿದಂತೆ ಮೂವರು ಉಗ್ರರು ಅವಿತಿದ್ದಾರೆ ಎಂಬ ಖಚಿತ ಸುಳಿವಿನ ಮೇರೆಗೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಶನಿವಾರ ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು