ಶುಕ್ರವಾರ, ಮೇ 20, 2022
26 °C

ಕರ್ನಾಟಕದಲ್ಲಿ ನಿತ್ಯ ಶೇ 61.5ರಷ್ಟು ಘನತ್ಯಾಜ್ಯ ಸಂಸ್ಕರಣೆ –ಸಿಪಿಸಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕರ್ನಾಟಕದಲ್ಲಿ ಪ್ರತಿನಿತ್ಯ ಸರಾಸರಿ 11,085 ಟನ್‌ನಷ್ಟು ಘನತ್ಯಾಜ್ಯ ಉತ್ಪಾದನೆಯಾಗಲಿದ್ದು, ಈ ಪೈಕಿ 6,817 ಟನ್‌ ಅಂದರೆ ಶೇ 61.5ರಷ್ಟನ್ನು ಸಂಸ್ಕರಿಸಲಾಗುತ್ತದೆ.

ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) ಈ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯದ ಪೀಠಕ್ಕೆ ಮಾಹಿತಿ ನೀಡಿದೆ.

ಬೆಂಗಳೂರಿನ ಹಲಸೂರು ಕೆರೆ ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ. ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಈ ಮೊದಲು ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದೂ ಪೀಠ ಇದೇ ಸಂದರ್ಭದಲ್ಲಿ ಸಿಪಿಸಿಬಿಗೆ ತಿಳಿಸಿತು.

ಕರ್ನಾಟಕದಲ್ಲಿ 316 ನಗರ ಸ್ಥಳೀಯ ಸಂಸ್ಥೆಗಳು, 286 ಸ್ಥಳೀಯ ಸಂಸ್ಥೆಗಳು ಈಗಾಗಲೇ ಮನೆಯಿಂದ ಕಸ ಸಂಗ್ರಹಿಸುತ್ತಿರುವ ಕ್ರಮ ಜಾರಿಗಳಿಸಿವೆ. ಉಳಿದ ಸಂಸ್ಥೆಗಳು ಇದನ್ನು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿವೆ.

ರಾಜ್ಯದಲ್ಲಿ 217 ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣ  ಘಟಕಗಳಿವೆ. ಇವುಗಳ ಒಟ್ಟು ಸಾಮರ್ಥ್ಯ 310 ಟನ್‌ಗಳು. ಅಲ್ಲದೆ, 216 ಕಾಂಪೋಸ್ಟ್‌ ಘಟಕಗಳಿದ್ದು, ಇವುಗಳ ಒಟ್ಟು ಸಾಮರ್ಥ್ಯ ನಿತ್ಯ 5,834 ಟನ್‌ಗಳು ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು