ಸೋಮವಾರ, ಮಾರ್ಚ್ 20, 2023
24 °C

ಭಾರತಕ್ಕೆ ಭೇಟಿ ನೀಡಿ ಅಭಿಯಾನಕ್ಕೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣನ್ ರೆಡ್ಡಿ ಅವರು ಮಂಗಳವಾರ ‘ಭಾರತಕ್ಕೆ ಭೇಟಿ ನೀಡಿ’ (ವಿಸಿಟ್‌ ಇಂಡಿಯಾ ಇಯರ್‌ 2023) ಅಭಿಯಾನ ಮತ್ತು ಅದರ ಲಾಂಛನವನ್ನು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ,‘ಜಿ 20 ಅಧ್ಯಕ್ಷತೆಯು ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅತ್ಯುತ್ತಮ ಅವಕಾಶ ಒದಗಿಸಿದೆ’ ಎಂದು ಹೇಳಿದರು.

ಭಾರತವು ಕಳೆದ ಡಿ. 1ರಿಂದ ಜಿ 20 ಅಧ್ಯಕ್ಷತೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ 55 ಕಡೆಗಳಲ್ಲಿ 200ಕ್ಕೂ ಹೆಚ್ಚು ಸಭೆಗಳು ನಡೆಯಲಿವೆ. ಸೆ.9 ಮತ್ತು 10ರಂದು ಸಮಾರೋಪ ಸಮಾರಂಭ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು