ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧಗಯಾ ವರ್ಷಪೂರ್ತಿ ಪ್ರವಾಸಿಗರ ಆಕರ್ಷಕ ತಾಣವಾಗಿಸಲು ಯೋಜನೆ

Last Updated 7 ಅಕ್ಟೋಬರ್ 2021, 10:22 IST
ಅಕ್ಷರ ಗಾತ್ರ

ಬೋಧಗಯಾ (ಬಿಹಾರ): ಪ್ರಮುಖ ಬೌದ್ಧ ಯಾತ್ರಾ ಸ್ಥಳ ಬೋಧಗಯಾವನ್ನು ವರ್ಷಪೂರ್ತಿ ಪ್ರವಾಸಿಗರ ಆಕರ್ಷಕ ತಾಣವನ್ನಾಗಿ ರೂಪಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಯೋಜನೆ ಸಿದ್ಧಪಡಿಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇಲ್ಲಿ ಇತ್ತೀಚೆಗೆ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದ ಪ್ರವಾಸೋದ್ಯಮ ಸಚಿವಾಲಯದ ಪ್ರಧಾನ ನಿರ್ದೇಶಕಿ ಜಿ. ಕಮಲ ವರ್ಧನ ರಾವ್‌ ಅವರು ಬೋಧಗಯಾ ಅಭಿವೃದ್ಧಿಪಡಿಸುವ ಕುರಿತು ಮಾತನಾಡಿದರು.

ಪ್ರವಾಸೋದ್ಯಮ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಮಾನ, ರೈಲು ಮತ್ತು ರಸ್ತೆ ಸಂಪರ್ಕವನ್ನು ಹೆಚ್ಚಿಸುವ ಕುರಿತ ಚರ್ಚೆಯೇ ವಿಚಾರ ಸಂಕಿರಣದ ಪ್ರಮುಖ ವಿಷಯವಾಗಿತ್ತು.

‘ಬಿಹಾರದ ಗಯಾ ಜಿಲ್ಲೆಯು ಧಾರ್ಮಿಕ ಮತ್ತು ಆಧ್ಯಾತ್ಮಕ ಪ್ರವಾಸೋದ್ಯಮಕ್ಕೆ ಪ್ರಸಿದ್ಧವಾಗಿದ್ದು, ಹೆಚ್ಚಾಗಿ ಹಿರಿಯ ನಾಗರಿಕರನ್ನು ಆಕರ್ಷಿಸುತ್ತಿದೆ. ಆದರೆ, ಯುವ ಸಮೂಹದ ಗಮನವನ್ನು ಸೆಳೆಯುವಂತೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದು ಪ್ರವಾಸೋದ್ಯಮ ಸಚಿವಾಲಯದ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು. ಇದೇ ವೇಳೆ ಬೌದ್ಧ ಧರ್ಮದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಸಾಹಸ ಪ್ರವಾಸೋದ್ಯಮ ಸೇರಿದಂತೆ ಹೊಸ ಪರಿಕಲ್ಪನೆಗಳನ್ನು ಅಳವಡಿಸುವ ಮೂಲಕ ಯುವ ಪ್ರವಾಸಿಗರನ್ನು ಸೆಳೆಯುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

‘ವಿಶ್ವದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು, ಇಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಈ ವಿಷಯದ ಮೇಲೆ ಸರ್ಕಾರ ಕೆಲಸ ಮಾಡುತ್ತಿದೆ‘ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT