ಸೋಮವಾರ, ಡಿಸೆಂಬರ್ 5, 2022
21 °C
ಈ ವರ್ಷ 1.28 ಕೋಟಿ ಪ್ರವಾಸಿಗಳ ಆಗಮನ

ಹಿಮಾಚಲ ಪ್ರದೇಶ: ಗರಿಗೆದರಿದ ಪ್ರವಾಸೋದ್ಯಮ ಚಟುವಟಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಿಮ್ಲಾ: ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ಕುಸಿದಿದ್ದ ಹಿಮಾಚಲ ಪ್ರದೇಶದಲ್ಲಿ ಈಗ ಪ್ರವಾಸೋದ್ಯಮ ಮತ್ತೆ ಗರಿಗೆದರಿದೆ. ಈ ವರ್ಷ ಅಕ್ಟೋಬರ್‌ 31ರ ವರೆಗೆ 1.28 ಕೋಟಿ ಪ್ರವಾಸಿಗರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಅವರಲ್ಲಿ 28,232 ವಿದೇಶಿಯರು ಸೇರಿದ್ದಾರೆ ಎಂದು ರಾಜ್ಯದ ಪ್ರವಾಸೋದ್ಯಮ ಇಲಾಖೆ ಅಂಕಿಅಂಶ ನೀಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಮೂರು ಪಟ್ಟು ಹೆಚ್ಚು ಎನ್ನಲಾಗಿದೆ.

2019ರಲ್ಲಿ 1.72 ಕೋಟಿ ಪ್ರವಾಸಿಗರು ರಾಜ್ಯಕ್ಕೆ ಆಗಮಿಸಿದ್ದರು. ಅದಕ್ಕೆ ಹೋಲಿಸಿದರೆ 2020ರಲ್ಲಿ ಪ್ರವಾಸಿಗಳ ಸಂಖ್ಯೆ ಶೇ 81ರಷ್ಟು ಕಡಿಮೆಯಾಗಿತ್ತು. ಕೇವಲ 32.13 ಲಕ್ಷ ಪ್ರವಾಸಿಗರು ಆ ವರ್ಷ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. 2021ರಲ್ಲಿ 56.37 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. 

‘ಹಿಮಾಚಲ ಪ್ರದೇಶ ಪ್ರವಾಸೋದ್ಯಮದ ಕುರಿತು ಟಿವಿ ವಾಹಿನಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೇಶದ ಇತರ ಪ್ರಾದೇಶಿಕ ಭಾಷೆಗಳಲ್ಲಿ ತೀವ್ರತರವಾದ ಪ್ರಚಾರ ನಡೆಸಿದ್ದೂ ಪ್ರವಾಸೋದ್ಯಮದ ಚೇತರಿಕೆಗೆ ಕಾರಣ’ ಎಂದು ಹಿಮಾಚಲ ಪ್ರದೇಶ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕ ಅಮಿತ್‌ ಕಶ್ಯಪ್‌ ಹೇಳಿದ್ದಾರೆ.

ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಕೋವಿಡ್‌ ಪೂರ್ವದಲ್ಲಿ ಆಗಮಿಸುತ್ತಿದ್ದಷ್ಟೇ ಪ್ರವಾಸಿಗರು ಈ ವರ್ಷವೂ ಆಗಮಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು