ಬುಧವಾರ, ಆಗಸ್ಟ್ 10, 2022
25 °C

ಹಿಮಾಚಲ ಪ್ರದೇಶ: ಕೇಬಲ್ ಕಾರ್‌ ಸ್ಥಗಿತ– 8 ಪ್ರವಾಸಿಗರ ರಕ್ಷಣೆಗೆ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ: ಹಿಮಾಚಲ ಪ್ರದೇಶದ ಪರ್ವಾನೂ ಬಳಿ ತಾಂತ್ರಿಕ ದೋಷದಿಂದ ಕೇಬಲ್ ಕಾರ್‌ ಸ್ಥಗಿತಗೊಂಡಿದ್ದು, ಅದರಲ್ಲಿ 8 ಮಂದಿ ಪ್ರವಾಸಿಗರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಸೋಲನ್ ಜಿಲ್ಲೆಯ ಚಂಡೀಗಢ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿಂಬರ್ ಟ್ರಯಲ್‌ ರೆಸಾರ್ಟ್‌ಗೆ ಸೇರಿದ ಕೇಬಲ್ ಕಾರ್‌ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸಿಲುಕಿಕೊಂಡಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಪ್ರವಾಸಿಗರನ್ನು ರಕ್ಷಿಸಲು ಸೇನೆಯನ್ನು ಕರೆಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಐಎಎನ್ಎಸ್‌ಗೆ ತಿಳಿಸಿದ್ದಾರೆ.

ಕೇಬಲ್ ಕಾರಿನಲ್ಲಿ ಸಿಲುಕಿರುವ ಪ್ರವಾಸಿಗರು ವಿಡಿಯೊಗಳನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರು ಪ್ರವಾಸಿಗರನ್ನು ಹಗ್ಗದ ಮೂಲಕ ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಶಾಸಕ ಧನಿ ರಾಮ್ ಶಾಂಡಿಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು