ಬುಧವಾರ, ಸೆಪ್ಟೆಂಬರ್ 22, 2021
29 °C
ಹಲವಡೆ ಭೂ ಕುಸಿತ

ವರುಣನ ಅರ್ಭಟ: ಗೋವಾ–ಕರ್ನಾಟಕ ಮಧ್ಯೆ ರೈಲು ಸಂಚಾರ ಅಸ್ತವ್ಯಸ್ತ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಸತತ ಮಳೆಯಿಂದಾಗಿ ಗೋವಾ–ಕರ್ನಾಟಕ ಗಡಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಹೀಗಾಗಿ ಉಭಯ ರಾಜ್ಯಗಳ ನಡುವೆ ಎರಡನೇ ದಿನವೂ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.

ಇದೇ ಪ್ರದೇಶದಲ್ಲಿ ಒಂದು ಕಡೆ ರೈಲು ಹಳಿ ತಪ್ಪಿದೆ. ಹುಬ್ಬಳ್ಳಿ ವಿಭಾಗದ ದೂಧ್‌ಸಾಗರ್ ಮತ್ತು ಸೊನಾಲಿಮ್‌, ಕಾರಂಜೋಲ್ ಮತ್ತು ದೂಧ್‌ಸಾಗರ್ ಮಾರ್ಗದ ಗುಡ್ಡಗಾಡು ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಭೂ ಕುಸಿತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಮಹಾರಾಷ್ಟ್ರದ ರತ್ನಾಗಿರಿ ಬಳಿಯ ವಶಿಷ್ಟಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ, ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಮಂಗಳೂರು ಜಂಕ್ಷನ್‌ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್‍ (ಸಿಎಸ್‌ಎಂಟಿ) ರೈಲಿನ ಮಾರ್ಗವನ್ನು ಬದಲಾಯಿಸಲಾಗಿತ್ತು. ಈ ರೈಲು ದೂಧ್‌ಸಾಗರ್–ಸೊನಾಲಿಮ್‌ ನಡುವೆ ಶುಕ್ರವಾರ ಮುಂಜಾನೆ ಹಳಿ ತಪ್ಪಿತ್ತು’ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು