ಬುಧವಾರ, ಜೂನ್ 16, 2021
22 °C

ಪುಲ್ವಾಮಾದಲ್ಲಿ ಐಇಡಿ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ: ತಪ್ಪಿದ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆ ಹಚ್ಚಿ, ಅದನ್ನು ನಿಷ್ಕ್ರಿಯಗೊಳಿಸುವ ಮೂಲಕ ಭಾರಿ ಅವಘಡವನ್ನು ತಪ್ಪಿಸಿದ ಘಟನೆ ಶನಿವಾರ ನಡೆದಿದೆ.


ಸ್ಫೋಟಕ 

ಜೈಷ್‌–ಎ–ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆ ಐಇಡಿ ಬಳಸಿ, ಭಾರಿ ವಿಧ್ವಂಸಕ ಕೃತ್ಯ ಎಸಗಲು ತಯಾರಿ ನಡೆಸಿದ್ದ ಬಗ್ಗೆ ಸುಳಿವು ಸಿಕ್ಕಿತು. ಇದೇ ಜಾಡು ಹಿಡಿದು ಕಾರ್ಯಾಚರಣೆ ಕೈಗೊಂಡು, ಶಂಕಿತ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಯಿತು. ಅವರು ನೀಡಿದ ಮಾಹಿತಿಯಂತೆ 10 ಕೆ.ಜಿ ಐಇಡಿ ವಶಪಡಿಸಿಕೊಂಡು, ಭಾರಿ ಅವಘಡವೊಂದನ್ನು ತಪ್ಪಿಸಿದೆವು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು