ಬುಧವಾರ, ಜೂನ್ 16, 2021
27 °C

ರೈಲುಗಳ ಓಡಾಟ ಎಂದಿನಂತೆ: ರೈಲ್ವೆ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹೆಚ್ಚುತ್ತಿರುವ ಕೋವಿಡ್‌–19 ಪ್ರಕರಣಗಳನ್ನು ನಿಯಂತ್ರಿಸಲು ಹಲವು ರಾಜ್ಯಗಳು ಲಾಕ್‌ಡೌನ್ ಘೋಷಿಸಿದ್ದರೂ ರೈಲುಗಳು ಮಾತ್ರ ಎಂದಿನಂತೆ ಸಂಚರಿಸಲಿವೆ. ಅಗತ್ಯಬಿದ್ದರೆ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ಭಾರತೀಯ ರೈಲ್ವೆ ಮಂಡಳಿಯು ತಿಳಿಸಿದೆ.

ಪ್ರಸ್ತುತ ಮೇಲ್ ಮತ್ತು ಎಕ್ಸ್‌ಪ್ರೆಸ್ ಸೇರಿದಂತೆ ಶೇ 70ರಷ್ಟು ರೈಲುಗಳು ಕೋವಿಡ್ ಪೂರ್ವದಿಂದಲೂ ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ, ಸುಮಾರು 330 ಬೇಸಿಗೆ ವಿಶೇಷ ರೈಲುಗಳು ಸಹ ಸಂಚರಿಸುತ್ತಿವೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಹೇಳಿದ್ದಾರೆ.

‘ಮಹಾರಾಷ್ಟ್ರ, ದೆಹಲಿ, ಗುಜರಾತ್ ಮತ್ತು ಕರ್ನಾಟಕದಿಂದ ದೇಶದ ಪೂರ್ವ ಭಾಗಗಳಿಗೆ ಹೆಚ್ಚಿನ ವಿಶೇಷ ರೈಲುಗಳು ಸಂಚರಿಸುತ್ತಿವೆ. ಮಂಡಳಿಯು ಒಟ್ಟಾರೆ ಪರಿಸ್ಥಿತಿ ಹಾಗೂ ಟಿಕೆಟಿಂಗ್ ಮಾದರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಜನಸಂದಣಿ ಹಾಗೂ ಅಗತ್ಯಬಿದ್ದ ಕಡೆಗಳಲ್ಲಿ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.

‘ರಾಜ್ಯಗಳು ಕೋವಿಡ್–19 ಮಾರ್ಗಸೂಚಿಗಳನ್ನು ಅನುಸರಿಸಲು ತಿಳಿಸಿವೆ. ಆದರೆ, ಯಾವ ರಾಜ್ಯವೂ ರೈಲ್ವೆ ಸಾರಿಗೆ ಸ್ಥಗಿತಗೊಳಿಸುವಂತೆ ಇದುವರೆಗೆ ಕೋರಿಲ್ಲ’ ಎಂದು ಸುನೀತ್ ಶರ್ಮಾ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು