ಶನಿವಾರ, ಮಾರ್ಚ್ 25, 2023
25 °C

ಬಡವರಿಗೆ ಹಣ ವರ್ಗಾಯಿಸಿ, ಬೇಡಿಕೆ ಹೆಚ್ಚಿಸಲು ಹೆಚ್ಚು ಸಾಲ ಮಾಡಿ: ಪಿ. ಚಿದಂಬರಂ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಭಾರತದ ಆರ್ಥಿಕತೆಯು ತೀವ್ರವಾಗಿ ಹೊಡೆತಕ್ಕೆ ಸಿಲುಕಿದ್ದು, ಬೇಡಿಕೆ ಹೆಚ್ಚಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸೂಚಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವು ಮೊದಲು ದೇಶದ ಶೇ 50ರಷ್ಟು ಕುಟುಂಬಗಳಿಗೆ ಸ್ವಲ್ಪ ಹಣವನ್ನು ವರ್ಗಾಯಿಸಬೇಕು. ಅಗತ್ಯವಿರುವ ಎಲ್ಲ ಕುಟುಂಬಗಳಿಗೆ ಕೇಂದ್ರದಿಂದ ಉಚಿತವಾಗಿ ಆಹಾರ ಧಾನ್ಯವನ್ನು ಸಹ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಮೂಲಸೌಕರ್ಯ ಯೋಜನೆಗಳ ಖರ್ಚಿಗೆ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು.  ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸಲು ಸರ್ಕಾರವು ಬೃಹತ್ ಲೋಕೋಪಯೋಗಿ ಕೆಲಸಗಳನ್ನು ಪ್ರಾರಂಭಿಸಬೇಕು ಮತ್ತು ಆಹಾರ ಧಾನ್ಯಗಳ ವಿಷಯದಲ್ಲಿ ವೇತನವನ್ನು ಪಾವತಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: 

ಬ್ಯಾಂಕುಗಳ ಸಾಲ ಸಾಮರ್ಥ್ಯವನ್ನು ಹೆಚ್ಚಿಸಲು, ಕೇಂದ್ರವು ಅವುಗಳನ್ನು ಮರು ಬಂಡವಾಳ ಹೂಡಿಕೊಳ್ಳಬೇಕು, ಕೇಂದ್ರವು ಬಾಕಿ ಇರುವ ಜಿಎಸ್‌ಟಿ ಪರಿಹಾರವನ್ನು ರಾಜ್ಯಗಳಿಗೆ ಪಾವತಿಸಬೇಕು. 'ಮೇಲಿನ ಎಲ್ಲದಕ್ಕೂ ಹಣ ಬೇಕಾಗುತ್ತದೆ. ಎರವಲು ಪಡೆಯಿರಿ.. ಹಿಂಜರಿಯಬೇಡಿ ಎಂದಿದ್ದಾರೆ.

ಈ ವರ್ಷ ಹೆಚ್ಚಿನ ಸಾಲ ಪಡೆಯಲು ಸರ್ಕಾರ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಮಾನದಂಡಗಳನ್ನು ಸಡಿಲಿಸಬೇಕು ಎಂದು ಮಾಜಿ ಸಚಿವರು ಹೇಳಿದ್ದಾರೆ.

ವಿತರಣಾ ಯೋಜನೆಯನ್ನು ಸಹ ತ್ವರಿತಗೊಳಿಸಬೇಕು. ಅಂತಾರಾಷ್ಟ್ರೀಯ ಹಣಕಾಸು ನಿಧಿ, ವಿಶ್ವ ಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನಂತಹ ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಬರುವ ಅವಕಾಶಗಳನ್ನು ಸರ್ಕಾರ ಬಳಸಿಕೊಳ್ಳಬೇಕು. ಕೊನೆಯ ಅವಕಾಶವಾಗಿ, ಕೇಂದ್ರವು ಕೊರತೆಯ ಭಾಗವನ್ನು ವಿನಿಯೋಗಿಸಬೇಕು ಎಂದು ಅವರು ಹೇಳಿದರು.

ವಿಶೇಷವೆಂದರೆ, ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಶೀಘ್ರಗತಿಯಲ್ಲಿ ಏರುತ್ತಿರುವುದರಿಂದ ಕೇಂದ್ರವು ಈಗಾಗಲೇ ಉಚಿತ ಪಡಿತರ ಯೋಜನೆ, ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್‌ವರೆಗೆ ವಿಸ್ತರಿಸಿದೆ.

ಆರ್ಥಿಕ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ 23.9 ರಷ್ಟು ಕುಗ್ಗಿದೆ ಮತ್ತು ಕೃಷಿ ಹೊರತುಪಡಿಸಿ ಎಲ್ಲಾ ಪ್ರಮುಖ ಕ್ಷೇತ್ರಗಳ ಕಾರ್ಯಕ್ಷಮತೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಮಾಹಿತಿ ಬಿಡುಗಡೆ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು