ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಭೋಲ್ಕರ್‌ ಹತ್ಯೆ: 2–3 ತಿಂಗಳಲ್ಲಿ ವಿಚಾರಣೆ ಮುಕ್ತಾಯ; ಸಿಬಿಐ

Last Updated 7 ಫೆಬ್ರುವರಿ 2023, 12:37 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ವಿಚಾರಣೆಯು ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮಂಗಳವಾರ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಲ್ಲಿ ಬಂಧಿಸಲ್ಪಟ್ಟಿರುವ ಆರೋಪಿ ವೀರೇಂದ್ರ ಸಿನ್ಹಾ ತಾವ್ಡೆ ಸಲ್ಲಿಸಿರುವ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಪಿ.ಡಿ.ನಾಯ್ಕ್ ಅವರಿದ್ದ ವಿಭಾಗೀಯ ಪೀಠದ ಎದುರು ಹಾಜರಾದ ಸಿಬಿಐ ಪರ ವಕೀಲ ಸಂದೇಶ ಪಾಟೀಲ್ ಅವರು, ‘ಪುಣೆಯ ವಿಚಾರಣಾ ನ್ಯಾಯಾಲಯವು ಈವರೆಗೆ 15 ಸಾಕ್ಷಿಗಳ ವಿಚಾರಣೆ ನಡೆಸಿದೆ. ಇನ್ನು ಕೇವಲ ಏಳು ಅಥವಾ 8 ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಎರಡು ಅಥವಾ ಮೂರು ತಿಂಗಳಲ್ಲಿ ಮುಕ್ತಾಯವಾಗಲಿದೆ’ ಎಂದು ತಿಳಿಸಿದರು.

ಬಳಿಕ ಕೋರ್ಟ್‌ ತಾವ್ಡೆ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.

2013ರ ಆ.20ರಂದು ಪುಣೆಯಲ್ಲಿ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ದಾಭೋಲ್ಕರ್ (67) ಅವರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT