ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಕ್ಕೆ ಆದಿವಾಸಿಗಳ ಕೊಡುಗೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

Last Updated 15 ಆಗಸ್ಟ್ 2022, 6:53 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಆದಿವಾಸಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಸ್ಮರಿಸಿದ್ದಾರೆ.

ಆದಿವಾಸಿ ಸಮುದಾಯದ ದ್ರೌಪದಿ ಮುರ್ಮು ರಾಷ್ಟ್ರಪತಿಯಾದ ಬೆನ್ನಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಆದಿವಾಸಿ ಸಮುದಾಯದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದಿರುವುದು ವಿಶೇಷ.

ಬಿರ್ಸಾ ಮುಂಡಾ, ಅಲ್ಲರಿ ಸೀತಾರಾಮರಾಜು, ಸಿದ್ದು ಕಾಳೊ, ತಿರೋತ್‌ ಸಿಂಗ್‌ ಅವರನ್ನು ಸ್ಮರಿಸಿದ ಪ್ರಧಾನಿಯವರು, ಇವರ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯ ಪಡೆದುಕೊಂಡಿದ್ದೇವೆ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಮೂಲೆ ಮೂಲೆಗಳಲ್ಲೂ ಹೋರಾಟ ನಡೆದಿತ್ತು. ಈ ಅಂದೋಲನ ಕಾಡಿಗೂ ಪಸರಿಸಿ, ಆದಿವಾಸಿ ಸಮುದಾಯದವರು ಕೂಡ ಹೋರಾಟಕ್ಕೆ ಇಳಿದರು. ಅವರ ಸೇವೆ ಅನನ್ಯ ಎಂದು ಪ್ರಧಾನಿ ಮೊದಿ ಹೇಳಿದರು.

ಆದಿವಾಸಿ ಸಮುದಾಯದ ಮಹಿಳೆಯನ್ನು ದೇಶದ ಉನ್ನತ ಹುದ್ದೆಗೆ ನೇಮಕ ಮಾಡಿದ್ದರ ಸೂಚಕವಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಆದಿವಾಸಿ ಸಮುದಾಯದ ಹೋರಾಟಗಾರರನ್ನು ಸ್ಮರಣೆ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT