ಗುರುವಾರ , ಫೆಬ್ರವರಿ 2, 2023
27 °C

ಟಿಎಂಸಿ ನಾಯಕ ಸಾಕೇತ್ ಗೋಖಲೆ ಬಂಧಿಸಿದ ಇ.ಡಿ ಅಧಿಕಾರಿಗಳು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತ್‌ ಜೈಲಿನಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ನಾಯಕ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್‌ ಪೊಲೀಸರು ಕಳೆದ ಡಿಸೆಂಬರ್‌ ತಿಂಗಳಲ್ಲಿ ಬಂಧಿಸಿದ್ದರು.

ಇದೀಗ ಅವರನ್ನು ಇ.ಡಿ ಅಧಿಕಾರಿಗು ಬಂಧಿಸಿದ್ದು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ಗುಜರಾತ್‌ ಪೊಲೀಸರು ಹೇಳಿದ್ದಾರೆ. 

ಈ ಹಿಂದೆ ಗುಜರಾತ್‌ನ ಮೊರ್ಬಿ ಸೇತುವೆ ದುರಂತದ ಕುರಿತು ಸುಳ್ಳು ಟ್ವೀಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕೇತ್ ಗೋಖಲೆ ಅವರನ್ನು ಬಂಧಿಸಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು