ನವದೆಹಲಿ: ತ್ರಿಪುರ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಟ್ವಿಟರ್‌ನಲ್ಲಿ ಮತಯಾಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಿಲೀಪ್ ಸೈಕಿಯಾ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಅಬಕಾರಿ ಹಗರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

60 ಸದಸ್ಯ ಬಲದ ತ್ರಿಪುರ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಈಶಾನ್ಯ ರಾಜ್ಯದಲ್ಲಿ ಮತದಾನ ನಡೆಯುತ್ತಿರುವಾಗ ಟ್ವಿಟರ್‌ನಲ್ಲಿ ಮತ ಯಾಚಿಸಿದ್ದು, ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಅಲ್ಲದೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ.

ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಬಿಜೆಪಿಯ ಟ್ವಿಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್‌ನಲ್ಲಿ, ತ್ರಿಪುರದ ಜನತೆ ಕಾಂಗ್ರೆಸ್‌ಗೆ ಮತ ಚಲಾಯಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಬರಲಿದೆ ಎಂದು ಉಲ್ಲೇಖ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.