ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ ಚುನಾವಣೆ: ಸಿಎಆರ್‌ಎಫ್‌ನ ತುಕಡಿ ತಕ್ಷಣ ಒದಗಿಸಲು ‘ಸುಪ್ರೀಂ’ ಸೂಚನೆ

Tripura municipal Polls: SC directs MHA to immediately provide two companies of CAPF
Last Updated 25 ನವೆಂಬರ್ 2021, 7:02 IST
ಅಕ್ಷರ ಗಾತ್ರ

ನವದೆಹಲಿ: ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಪ್ರತಿ ಮತಗಟ್ಟೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಆರ್ ಎಫ್‌) ಎರಡು ಹೆಚ್ಚುವರಿ ತುಕಡಿಗಳನ್ನು ತಕ್ಷಣ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ಸೂಚನೆ ನೀಡಿದೆ.

ಈ ತುಕಡಿಗಳು ಮತ ಎಣಿಕೆ ನಡೆಯುವ ಇದೇ 28ರವರೆಗೆ ರಾಜ್ಯದಲ್ಲಿ ಇರಬೇಕು ಎಂದೂ ಸ್ಪಷ್ಟ ಪಡಿಸಿದೆ.

ಬೆಳಿಗ್ಗೆ ಮತದಾನ ಆರಂಭವಾದಾಗಿನಿಂದಲೂ ತಮ್ಮ ಅಭ್ಯರ್ಥಿಗಳು ಮತ್ತು ಬೆಂಬಲಿಗರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ ಮತ್ತು ಮತಗಟ್ಟೆಗಳ ಬಳಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ ಅವರನ್ನೊಳಗೊಂಡ ಪೀಠಕ್ಕೆ ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್‌ ಮತ್ತು ಸಿಪಿಎಂ ಪರ ವಕೀಲರು ತಿಳಿಸಿದರು.

ಅಲ್ಲಿನ ಭದ್ರತಾ ವ್ಯವಸ್ಥೆಗಳನ್ನು ಕೂಡಲೇ ಪರಿಶೀಲಿಸುವಂತೆ ಮತ್ತು ಅಗತ್ಯವಾದರೆ ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡುವಂತೆ ಪೀಠವು ಡಿಜಿಪಿ ಮತ್ತು ತ್ರಿಪುರಾ ಗೃಹ ಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿತು.

ಮುಕ್ತ ಮತ್ತು ನ್ಯಾಯಯುತ ಮತದಾನ ನಡೆಯುವಂತೆ ಮಾಡಲು ಎಲ್ಲಾ ಮತಗಟ್ಟೆಗಳಲ್ಲಿ ಭದ್ರತಾ ಸಿಬ್ಬಂದಿ ಸೂಕ್ತ ಸಂಖ್ಯೆಯಲ್ಲಿ ಇರಬೇಕು ಎಂದು ತ್ರಿಪುರಾ ಚುನಾವಣಾ ಆಯೋಗ, ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಗೆ ಸೂಚನೆಯನ್ನೂ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT