ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: ಟಿಆರ್‌ಎಸ್‌ಗೆ ಶಾಕ್ (55), ಬಿಜೆಪಿ ಭರ್ಜರಿ ಬೇಟೆ (48), ಎಂಐಎಂ 44

Last Updated 5 ಡಿಸೆಂಬರ್ 2020, 6:48 IST
ಅಕ್ಷರ ಗಾತ್ರ

ಹೈದರಾಬಾದ್‌:'ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌' (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಶುಕ್ರವಾರ ನಡೆದಿದ್ದು, ಆಡಳಿತಾರೂಢ ಟಿಆರ್‌ಎಸ್ ಆಘಾತ ಅನುಭವಿಸಿದೆ. ಭರ್ಜರಿ ಪ್ರಚಾರದಲ್ಲಿ ತೊಡಗಿದ ಬಿಜೆಪಿ 48 ವಾರ್ಡ್‌ಗಳಲ್ಲಿ ವಿಜಯಿಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ತೆಲಂಗಾಣ ರಾಜ್ಯದ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಅಪ್‌ಡೇಟ್‌ ಪ್ರಕಾರ, ಟಿಆರ್‌ಎಸ್ 55ವಾರ್ಡ್‌ಗಳಲ್ಲಿ ಮತ್ತು ಅಸಾದುದ್ದೀನ್‌ ಒವೈಸಿ ನೇತೃತ್ವದ ಎಐಎಂಐಎಂ 44ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿವೆ. ಬಿಜೆಪಿ 48ವಾರ್ಡ್‌ಗಳಲ್ಲಿ ಹಾಗೂ ಕಾಂಗ್ರೆಸ್‌ 2ವಾರ್ಡ್‌ನಲ್ಲಿ ಗೆಲುವು ಪಡೆದಿದೆ.

ಈ ಮೂಲಕ ಬಿಜೆಪಿ 2ನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಈ ಸಾಧನೆಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಎಐಎಂಐಎಂ 3ನೇ ಸ್ಥಾನಕ್ಕೆ ತಳ್ಳಲು ಪಟ್ಟಿದೆ.150 ವಾರ್ಡ್‌ಗಳ ಫಲಿತಾಂಶ ಶುಕ್ರವಾರ ರಾತ್ರಿ ಪ್ರಕಟವಾಗಿದೆ.

ಬಿಜೆಪಿ ಕಳೆದ ಚುನಾವಣೆಗಿಂತ ಅತಿ ದೊಡ್ಡ ಬದಲಾವಣೆ ಕಂಡಂತಾಗಿದೆ. 2016ರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಕೇವಲ 4 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಆಗ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಆ ಚುನಾವಣೆಯಲ್ಲಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) 150 ವಾರ್ಡ್‌ಗಳ ಪೈಕಿ 99 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿತ್ತು.

ಮಂಗಳವಾರ ನಡೆದ ಪಾಲಿಕೆ ಚುನಾವಣೆಯಲ್ಲಿ ಮತದಾನಕ್ಕೆ ಬ್ಯಾಲೆಟ್‌ ಪೇಪರ್‌ (ಮತಪತ್ರ) ಬಳಕೆ ಮಾಡಲಾಗಿತ್ತು.

ಶುಕ್ರವಾರ ಬೆಳಿಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆಯೊಂದಿಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು. ಆರಂಭದಲ್ಲಿ ಬಿಜೆಪಿ ಸುಮಾರು 80 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿತ್ತು. ಮತಪತ್ರ ಬಳಕೆಯಾಗಿರುವುದರಿಂದ ಫಲಿತಾಂಶ ಹೊರಬರಲು ಹೆಚ್ಚಿನ ಸಮಯ ಬೇಕಾಯಿತು.

ಒಟ್ಟು 74.67 ಲಕ್ಷ ಮತದಾರರ ಪೈಕಿ 34.50 ಲಕ್ಷ ಮಂದಿ ಮತದಾನ ನಡೆಸಿದ್ದರು. ಈ ಮೂಲಕ ಶೇ 46.55ರಷ್ಟು ಮತದಾನ ದಾಖಲಾಗಿತ್ತು.

ಟಿಆರ್‌ಎಸ್‌ ಎಲ್ಲ 150 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿ 149 ವಾರ್ಡ್‌ಗಳಲ್ಲಿ, ಕಾಂಗ್ರೆಸ್‌, ಎಐಎಂಐಎಂ ಹಾಗೂ ಟಿಡಿಪಿ ಕ್ರಮವಾಗಿ 146, 51 ಹಾಗೂ 106 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಮುಖಂಡರು ಬಿಜೆಪಿ ಪರ ಪಾಲಿಕೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT