ಮಂಗಳವಾರ, ಆಗಸ್ಟ್ 16, 2022
30 °C

ಡಿ.8ರ ‘ಭಾರತ್‌ ಬಂದ್‌’ಗೆ ಟಿಆರ್‌ಎಸ್‌ ಬೆಂಬಲ

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್‌ ಬಂದ್‌‘ಗೆ ತೆಲಂಗಾಣ ರಾಷ್ಟ್ರ ಸಮಿತಿಯು(ಟಿಆರ್‌ಎಸ್‌) ಬೆಂಬಲ ಸೂಚಿಸಿದೆ.

‘ಪಕ್ಷದ ಎಲ್ಲಾ ಸದಸ್ಯರು ಮುಷ್ಕರದಲ್ಲಿ ಭಾಗಿಯಾಗಿ, ಬಂದ್‌ ಯಶಸ್ವಿಗೊಳಿಸಲಿದ್ದಾರೆ. ರೈತರು ಕಾನೂನು ಬದ್ಧವಾಗಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಹಾಗಾಗಿ ನಮ್ಮ ಪಕ್ಷವು ಬಂದ್‌ಗೆ ಬೆಂಬಲ ಸೂಚಿಸಿದೆ’ ಎಂದು ಟಿಆರ್‌ಎಸ್‌ ಅಧ್ಯಕ್ಷ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಅವರು ತಿಳಿಸಿದ್ದಾರೆ.

‘ನಮ್ಮ ಪಕ್ಷವು ಈ ಹಿಂದೆಯೂ ಸಂಸತ್ತಿನಲ್ಲಿ ಈ ಮಸೂದೆಯನ್ನು ವಿರೋಧಿಸಿತ್ತು. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವರೆಗೂ ಪ್ರತಿಭಟನೆ ಮುಂದುವರಿಯಬೇಕು’ ಎಂದು ಅವರು ಹೇಳಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ವಿವಿಧ ರೈತಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಮತ್ತು ಭಾರತ್‌ ಬಂದ್‌ಗೆ ಹಲವು ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು