ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದ ಟಿಆರ್‌ಎಸ್ ಸರ್ಕಾರ ಭ್ರಷ್ಟ ಹಾಗೂ ಕುಟುಂಬ ರಾಜಕಾರಣದ ಲಾಂಛನ: ಬಿಜೆಪಿ

Last Updated 3 ಜುಲೈ 2022, 13:48 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಸರ್ಕಾರವು ಕುಟುಂಬ ಹಾಗೂ ಭ್ರಷ್ಟ ರಾಜಕಾರಣದ ಲಾಂಛನವಾಗಿ ಬದಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ಡಿ.ಕೆ. ಅರುಣಾ ಅವರು ತೆಲಂಗಾಣ ಸ್ಥಿತಿಗತಿಗೆ ಸಂಬಂಧಿಸಿದ ಹೇಳಿಕೆಯನ್ನು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿಬಿಡುಗಡೆ ಮಾಡಿದರು.

ಈ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌, ಬಿಜೆಪಿಯ ಹೋರಾಟ ಮತ್ತು ಯುವಕರ ತ್ಯಾಗದಿಂದಾಗಿ ತೆಲಂಗಾಣ ರಚನೆಯಾಯಿತು. ಆದರೆ, ಕಳೆದ ಎಂಟು ವರ್ಷಗಳಲ್ಲಿ ಟಿಆರ್‌ಎಸ್‌ ಸರ್ಕಾರವು ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಇದು (ಟಿಆರ್‌ಎಸ್‌)ಕುಟುಂಬ ಹಾಗೂ ಭ್ರಷ್ಟ ರಾಜಕಾರಣದ ಲಾಂಛನವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ತೆಲಂಗಾಣ ಜನರ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳು ನಿರಂತರವಾಗಿ ಏರುತ್ತಲೇ ಇವೆ ಎಂದೂ ದೂರಿದ್ದಾರೆ.

ಇದೇ ವೇಳೆ ಮಾತನಾಡಿದ ತೆಲಂಗಾಣದವರೇ ಆದರ ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ, ಎಂಟು ವರ್ಷಗಳಿಂದ ರಾಜ್ಯ ಸಚಿವಾಲಯಕ್ಕೆ ಹೋಗದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ (ಕೆಸಿಆರ್‌), ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಅವರನ್ನು ಮಾತ್ರ ಭೇಟಿ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

'ಕೆಸಿಆರ್‌ ಅವರ ಬೆಡ್‌ರೂಂಗೆ ಹೋಗುವುದಕ್ಕೂ ಓವೈಸಿಗೆ ಅನುಮತಿ ಇದೆ. ಅವರಿಬ್ಬರೂ (ಕೆಸಿಆರ್‌ ಹಾಗೂ ಓವೈಸಿ)ಒಟ್ಟಾಗಿ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT