ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಅಸ್ಸಾಂ ಸಿಎಂ ಮೈಕ್ ಕಿತ್ತೆಸೆದ ಟಿಆರ್‌ಎಸ್ ನಾಯಕ; ಕೆಲಕಾಲ ಉದ್ವಿಗ್ನತೆ

Last Updated 10 ಸೆಪ್ಟೆಂಬರ್ 2022, 7:38 IST
ಅಕ್ಷರ ಗಾತ್ರ

ಹೈದರಾಬಾದ್: ನಗರದ ಎಂ.ಜೆ ಮಾರ್ಕೆಟ್‌ನಲ್ಲಿ ಶುಕ್ರವಾರ ಸಂಜೆ ನಡೆದ ಗಣೇಶ ಮೆರವಣಿಗೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾಗವಹಿಸಿದ್ದರು.

ರ್‍ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಹಿಮಂತ ಬಿಸ್ವಾ ಶರ್ಮಾ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್‌) ನಾಯಕ ನಂದ ಕಿಶೋರ್‌, ವೇದಿಕೆಯ ಮೇಲೆ ಹೋಗಿ ಮೈಕ್ ಅನ್ನು ಕಿತ್ತೆಸೆದಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಹಿಮಂತ ಬಿಸ್ವಾ ಶರ್ಮಾ ತಮ್ಮ ಭಾಷಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಟೀಕಿಸಿದ್ದರು. ತೆಲಂಗಾಣದಲ್ಲಿ ಒಂದು ಕುಟುಂಬ (ಕೆಸಿಆರ್) ಮಾತ್ರ ಸಂತೋಷವಾಗಿದೆ ಎಂದು ಆರೋಪಿಸಿದ್ದರು.

ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್‌, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಸದಸ್ಯರು ಕಿಶೋರ್‌ನನ್ನು ಹಿಡಿದಿದ್ದಾರೆ.

ವಾರ್ಷಿಕ ಗಣೇಶ ಮೆರವಣಿಗೆ ವೇಳೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉದ್ವಿಗ್ನತೆಗೆ ಕಾರಣವಾಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ನಂದ ಕಿಶೋರ್‌ನನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೂ ಮುನ್ನ ಹಿಮಂತ ಬಿಸ್ವಾ ಶರ್ಮಾ ಅವರು ಚಾರ್ಮಿನಾರ್‌ನಲ್ಲಿರುವ ಭಾಗ್ಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅವರು ಅಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದರು. ಆದರೆ, ಭಾಷಣಕ್ಕೆ ಅನುಮತಿ ಇಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ಅವರನ್ನು ತಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT