ಬಿ.ಎಲ್. ಸಂತೋಷ್‌ಗೆ ನೋಟಿಸ್: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಹೈದರಾಬಾದ್: ಬಿಆರ್‌ಎಸ್ ಶಾಸಕರನ್ನು ಖರೀದಿಸಲು ಯತ್ನಿಸಲಾಗಿತ್ತು ಎಂಬ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಜಾರಿ ಮಾಡಿದ್ದ ನೋಟಿಸ್‌ಗೆ ನೀಡಿದ್ದ ತಡೆಯಾಜ್ಞೆಯನ್ನು ತೆಲಂಗಾಣ ಹೈಕೋರ್ಟ್ ಡಿಸೆಂಬರ್ 13ರವರೆಗೆ ವಿಸ್ತರಿಸಿದೆ.
ನ್ಯಾಯಮೂರ್ತಿ ಕೆ. ಸುರೇಂದರ್ ಅವರು ತಡೆಯಾಜ್ಞೆಯನ್ನು ವಿಸ್ತರಿಸಿದ್ದಾರೆ. ನ್ಯಾಯಾಲಯವು ಈ ಹಿಂದೆ ಡಿಸೆಂಬರ್ 5ರ ವರೆಗೆ ತಡೆಯಾಜ್ಞೆ ನೀಡಿತ್ತು.
ಬಿಜೆಪಿಯ ಏಜೆಂಟರು ಎನ್ನಲಾಗಿರುವ ದೆಹಲಿಯ ಮೂವರು ವ್ಯಕ್ತಿಗಳು ಹಾಗೂ ಬಿಆರ್‌ಎಸ್ ಶಾಸಕರ ನಡುವಣ ವಿಡಿಯೊ ಸಂವಾದದಲ್ಲಿ ಸಂತೋಷ್ ಅವರ ಹೆಸರು ಹಲವು ಬಾರಿ ಉಲ್ಲೇಖವಾಗಿತ್ತು. ಈ ವಿಡಿಯೊವನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನ. 3ರಂದು ಬಿಡುಗಡೆ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.