ಉತ್ತರಪ್ರದೇಶದಲ್ಲಿ ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರ ಸಾವು

ಇಟಾಹ್ (ಉತ್ತರ ಪ್ರದೇಶ): ಇಲ್ಲಿನ ಪಿಲುವಾ ಬೈಪಾಸ್‌ನಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ಕಾರು ದೆಹಲಿಯಿಂದ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತದ ನಂತರ ಟ್ರಕ್ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ರಫೀಕ್ (68) ಮತ್ತು ಜಾವಿದ್ ಅಹ್ಮದ್ (71) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಟ್ರಕ್ ಚಾಲಕನನ್ನು ಶ್ರೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.