ಬುಧವಾರ, ಏಪ್ರಿಲ್ 21, 2021
30 °C

ಪೆಟ್ರೋಲ್, ಡೀಸೆಲ್‌ನಿಂದ ಹೆಚ್ಚಿನ ಆದಾಯ; ಈ ಬಗ್ಗೆ ಸತ್ಯ ಸ್ಪಷ್ಟ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಧನ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಸರ್ಕಾರದ ಮೇಲೆ ಹೊಸದಾಗಿ ವಾಗ್ದಾಳಿ ನಡೆಸಿದ್ದು, ಪೆಟ್ರೋಲ್ ಮತ್ತು ಡೀಸೆಲ್‌ನಿಂದ ಸರ್ಕಾರವು ಹೆಚ್ಚಿನ ಆದಾಯವನ್ನು ಸಂಗ್ರಹಿಸುತ್ತಿದೆ ಎಂಬ ಸತ್ಯವು ಈಗ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, 'ಸಾಮಾನ್ಯ ಜನರಿಂದ ಎಲ್‌ಪಿಜಿ-ಪೆಟ್ರೋಲ್-ಡೀಸೆಲ್ ಮೇಲೆ ನಿರ್ದಾಕ್ಷಿಣ್ಯವಾಗಿ ತೆರಿಗೆ ಸಂಗ್ರಹಿಸುವ ಮೂಲಕ ಕೇಂದ್ರ ಸರ್ಕಾರವು ತನ್ನ 'ಸ್ನೇಹಿತರ' ತೆರಿಗೆ ಮತ್ತು ಸಾಲಗಳನ್ನು ಮನ್ನಾ ಮಾಡುತ್ತಿದೆ. ಸತ್ಯ ಸ್ಪಷ್ಟವಾಗಿದೆ,' ಎಂದು ಹೇಳಿದ್ದಾರೆ.

ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ನೀಡಿದ ಉತ್ತರದಲ್ಲಿ ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದ್ವಿಗುಣಗೊಂಡಿದೆ ಮತ್ತು ಅದೇ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಸಂಗ್ರಹವು ಶೇ 459 ರಷ್ಟು ಏರಿಕೆಯಾಗಿದೆ ಎನ್ನುವ ಸುದ್ದಿಯ ವರದಿಯನ್ನು ಉಲ್ಲೇಖಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ... 

2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯ ಮೂಲಕ ₹ 21 ಲಕ್ಷ ಕೋಟಿಗಳನ್ನು ಸಂಗ್ರಹಿಸಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಮತ್ತು ಅವರ ಕಾಂಗ್ರೆಸ್ ಪಕ್ಷವು ಹೆಚ್ಚುತ್ತಿರುವ ಇಂಧನ ಬೆಲೆಗಳನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲಿ ಸತತ ಎರಡನೇ ದಿನವೂ ವಾಗ್ದಾಳಿ ಮುಂದುವರಿಸಿತು ಮತ್ತು ಈ ಕುರಿತು ಚರ್ಚೆಗೆ ಒತ್ತಾಯಿಸಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು