ಶುಕ್ರವಾರ, ಏಪ್ರಿಲ್ 16, 2021
21 °C

ತಿರುಪತಿಯಲ್ಲಿ ರಾಜ್ಯದ ಅತಿಥಿ ಗೃಹ ಪಾರದರ್ಶಕತೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುಪತಿ ವೆಂಕಟೇಶ್ವರ ದೇವಸ್ಥಾನ–ಸಾಂದರ್ಭಿಕ ಚಿತ್ರ

ಹೈದರಾಬಾದ್‌: ಕರ್ನಾಟಕ ಸರ್ಕಾರವು ತಿರುಪತಿಯಲ್ಲಿ ₹ 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಅತಿಥಿ ಗೃಹಗಳ ಯೋಜನೆಯ ಗುತ್ತಿಗೆ ಪತ್ರಗಳನ್ನು ನ್ಯಾಯಾಂಗ ಪೂರ್ವ ವೀಕ್ಷಣಾ ಆಯೋಗದ  ಅನುಮತಿಗಾಗಿ ಸಲ್ಲಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂನ (ಟಿಟಿಡಿ) ಅಧಿಕಾರಿಗಳು ತಿಳಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಟಿಟಿಡಿ ವೆಬ್‌ಸೈಟ್‌ ಮೂಲಕ ಸಾರ್ವಜನಿಕರಿಂದ ಬರುವ ಸಲಹೆಗಳು, ಆಕ್ಷೇಪಣೆಗಳನ್ನು ಅನುಮತಿ ನೀಡುವ ಮೊದಲು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದರು. ರಾಜ್ಯ ಸರ್ಕಾರ ಈಗಾಗಲೇ ₹100 ಕೋಟಿ ವರ್ಗಾಯಿಸಿದೆ. https://judcialpreview.ap.gov.in  ಮತ್ತು www.tirumala.org. ಇಲ್ಲಿ ಯೋಜನೆಯ ದಾಖಲೆಗಳು ಲಭ್ಯ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು