ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿಯಲ್ಲಿ ಮತ್ತೆ ಭೂಕಂಪ: 1 ಸಾವು

Last Updated 27 ಫೆಬ್ರುವರಿ 2023, 12:27 IST
ಅಕ್ಷರ ಗಾತ್ರ

ಅಂಕಾರ (ಎಪಿ): ಟರ್ಕಿಯಲ್ಲಿ ಮಂಗಳವಾರ ಮತ್ತೆ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್‌ ಮಾಪ‍ನದಲ್ಲಿ 5.6 ರಷ್ಟಿದೆ. ದುರಂತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, 69 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

12ಕ್ಕೂ ಹೆಚ್ಚು ಕಟ್ಟಡಗಳು ಕುಸಿದಿವೆ. ಭೂಕಂಪನದ ಕೇಂದ್ರ ಬಿಂದು ಮಲಾತ್ಯ ಪ್ರಾಂತ್ಯದ ಯೆಸಿಲಯುರ್ತ್‌ ನಗರದಲ್ಲಿ ಪತ್ತೆಯಾಗಿದೆ.

ಕುಸಿದಿದ್ದ ನಾಲ್ಕು ಅಂತಸ್ತಿನ ಕಟ್ಟಡದಿಂದ ತಮಗೆ ಸೇರಿದ್ದ ವಸ್ತುಗಳನ್ನು ತೆಗೆದುಕೊಂಡು ಬರಲು ಹೋಗಿದ್ದ ತಂದೆ, ಮಗಳು ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಯೆಸಿಲಯುರ್ತ್‌ ಮೇಯರ್‌ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ ಫೆಬ್ರುವರಿ 6ರಂದು ಪ್ರಬಲ 7.8 ಕಂಪನಾಂಕ ತೀವ್ರತೆಯ ಭೂಕಂಪ ಸಂಭವಿಸಿತ್ತು. 48,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT