ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜಯ ರಾವುತ್‌ರನ್ನು ಮುಂಬೈ ನ್ಯಾಯಾಲಯಕ್ಕೆ ಕರೆತಂದ ಇ.ಡಿ ಅಧಿಕಾರಿಗಳು

Last Updated 1 ಆಗಸ್ಟ್ 2022, 9:13 IST
ಅಕ್ಷರ ಗಾತ್ರ

ಮುಂಬೈ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್‌ ರಾವುತ್‌ ಅವರ ವಿಚಾರಣೆಯು ಮುಂಬೈ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ರಾವುತ್‌ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಂಜಯ್‌ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದರು.

ಇದೇ ವೇಳೆ, ರಾವುತ್‌ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.

ಮೂಲಗಳ ಪ್ರಕಾರ, ರಾವುತ್‌ ನಿವಾಸದಿಂದ ₹11.50 ಲಕ್ಷ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

₹1,034 ಕೋಟಿ ಮೊತ್ತದ ಪತ್ರಾ ಚಾಲ್‌ ಭೂ ಹಗರಣದ ಸುಳಿಯಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT